ಗೆಳೆಯರೊಂದಿಗೆ ಹರಟೆ ಹೊಡೆಯುತ್ತಿದ್ದಾಗಲೇ ಹೃದಯಾಘಾತದಿಂದ ಯುವಕ ನಿಧನ

ಸಾವು ಹೇಳಿ ಕೇಳಿ ಬರುವುದಿಲ್ಲ. ಮಧ್ಯಪ್ರದೇಶದ ರೇವಾದಲ್ಲಿ ಯುವಕನೊಬ್ಬ ತನ್ನ ಸ್ನೇಹಿತರೊಂದಿಗೆ ಅಂಗಡಿಯೊಂದರಲ್ಲಿ ಕುಳಿತು ಹರಟೆ ಹೊಡೆಯುತ್ತಿದ್ದಾಗ ಹೃದಯಾಘಾತವಾಗಿ ಕ್ಷಣಾರ್ಧದಲ್ಲಿ ಸಾವನ್ನಪ್ಪಿದ್ದಾನೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.