ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ಬಂಧನಕ್ಕೊಳಗಾಗಿರೋ ದರ್ಶನ್ ಆ್ಯಂಡ್ ಗ್ಯಾಂಗ್ ವಿಚಾರಣೆ ಮುಂದುವರಿದಿದೆ. ದರ್ಶನ್ ಸೇರಿ ಹಲವು ಆರೋಪಿಗಳನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಕೊಲೆ ಪ್ರಕರಣ ರಾಜ್ಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಚಿತ್ರದುರ್ಗದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗಿದೆ. ನಟ ದರ್ಶನ್ ಭಾವಚಿತ್ರಕ್ಕೆ ಚಪ್ಪಲಿಯಿಂದ ತುಳಿದು, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.