ನಿನ್ನೆ ಜೋಡಿ, ಇಂದು ವೈರಿ: ಕಿತ್ತಾಡಿದ ಭವ್ಯಾ-ತ್ರಿವಿಕ್ರಮ್

ಬಿಗ್​ಬಾಸ್ ಕನ್ನಡ ಸೀಸನ್ 11 ರ ಜೋಡಿ ಎಂದು ಭವ್ಯಾ ಗೌಡ ಮತ್ತು ತ್ರಿವಿಕ್ರಮ್ ಗುರುತಿಸಿಕೊಂಡಿದ್ದರು. ಇಬ್ಬರ ನಡುವೆ ಪ್ರೀತಿ-ಪ್ರೇಮ ನಡೆಯುತ್ತಿದೆ ಎಂದು ಮನೆ ಮಂದಿ ಮಾತನಾಡಿಕೊಳ್ಳುತ್ತಿದ್ದರು. ಕೆಲವು ದಿನಗಳ ಹಿಂದೆ ಸಹ ಇಬ್ಬರೂ ಇದೇ ವಿಷಯ ಚರ್ಚೆ ಮಾಡಿದ್ದರು. ಆದರೆ ಈಗ ಇಬ್ಬರೂ ಪರಸ್ಪರ ಜಗಳ ಮಾಡಿಕೊಂಡಿದ್ದಾರೆ.