ವಿಧಾನಸೌಧದ ಗೇಟ್ ಮುಂದೆ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ; ಪರಿಸ್ಥಿತಿ ನಿಭಾಯಿಸಲು ಪೊಲೀಸರ ಪರದಾಟ

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಎಲ್ಲ ಸಚಿವರು ಆರ್​ಸಿಬಿ ತಂಡದ ಆಟಗಾರರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಈಗಾಗಲೇ ವಿಧಾನಸೌಧದ ಹೊರಗೆ ಭಾರೀ ಸಂಖ್ಯೆಯಲ್ಲಿ ಆರ್​ಸಿಬಿ ಅಭಿಮಾನಿಗಳು ಸೇರಿದ್ದಾರೆ. ಸಾವಿರಾರು ಅಭಿಮಾನಿಗಳು ವಿಧಾನಸೌಧದ ಮುಂಭಾಗದ ಗೇಟ್​ ಸುತ್ತ ಗಂಟೆಗಟ್ಟಲೆ ಕಾದು ಕುಳಿತಿದ್ದಾರೆ.