ಪಶ್ಚಿಮಘಟ್ಟದ ಚಂದ್ರದ್ರೋಣ ಪರ್ವತ ಸಾಲಿನ ಶೋಲಾ ಹುಲ್ಲುಗಾವಲು ಪ್ರದೇಶದಲ್ಲಿ ಮಂಗಳವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಧಗಧಗಿಸಿ ಉರಿದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಮುಳ್ಳಯ್ಯನಗಿರಿ, ಸೀತಾಳಯ್ಯನ ಗಿರಿ ಗಾಳಿಕೆರೆ ಭಾಗದ 6 ಕಡೆ ಬೆಂಕಿ ಹೊತ್ತಿಕೊಂಡು ಅರಣ್ಯ ಸಂಪತ್ತು ನಾಶವಾಗಿದೆ.