ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆಯರು

ಮಹಾರಾಷ್ಟ್ರದ ನಾಸಿಕ್​ನಲ್ಲಿ ಕುಡಿಯುವ ನೀರಿಗಾಗಿ ಬಾವಿಯಿಂದ ನೀರು ಪಡೆಯಲು ಮಹಿಳೆಯರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿದ್ದಾರೆ. ಅದರ ವಿಡಿಯೋ ವೈರಲ್ ಆಗಿದೆ. ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಪೇಥ್ ತಾಲ್ಲೂಕಿನಲ್ಲಿರುವ ಬೋರಿಚಿವಾಡಿ ಗ್ರಾಮವು ತೀವ್ರ ನೀರಿನ ಬಿಕ್ಕಟ್ಟನ್ನು ಎದುರಿಸುತ್ತಿದೆ. ಅಲ್ಲಿನ ಮಹಿಳೆಯರು ನೀರಿಗಾಗಿ ದಿನನಿತ್ಯದ ಕಷ್ಟಗಳನ್ನು ಅನುಭವಿಸುತ್ತಿದ್ದಾರೆ.