ಕುಡಿದ ಅಮಲಿನಲ್ಲಿ ಟ್ರಕ್ ಚಾಲಕ ಅಪಘಾತ ಮಾಡಿದ್ದು, ಅಹಮದಾಬಾದ್‌ನಲ್ಲಿ ವ್ಯಕ್ತಿ ಹಾಗೂ 3 ವರ್ಷದ ಮೊಮ್ಮಗಳು ಮೃತಪಟ್ಟಿದ್ದಾರೆ. ಜನನಿಬಿಡ ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ಟ್ರಕ್ ಹಿಂದಿನಿಂದ ಬೈಕ್ಗೆ ಡಿಕ್ಕಿ ಹೊಡೆದಿದೆ. ಇಬ್ಬರೂ ಟ್ರಕ್ನ ಚಕ್ರಗಳ ಕೆಳಗೆ ಬಿದ್ದಿದ್ದಾರೆ. ಇದರ ಪರಿಣಾಮದಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.