ಕಲಬುರಗಿ: ಠಾಣೆಯಲ್ಲಿ ಇಸ್ಪೀಟ್​ ಆಡಿದ್ದ ಐದು ಮಂದಿ ಪೊಲೀಸರು​ ಅಮಾನತು

ವಾಡಿ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ಇಸ್ಪೀಟ್​ ಆಡುತ್ತಿದ್ದ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಇಸ್ಪೀಟ್​ ಆಡಿದ್ದ ಐವರು ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಮಾನತುಗೊಳಿಸಿದ್ದಾರೆ. ಪಿಎಸ್ಐಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗಿದೆ.