ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಬೊಮ್ಮಾಯಿ. ರಾಜಭವನದಲ್ಲಿ ರಾಜ್ಯಪಾಲರ ಭೇಟಿಯಾಗಿ ರಾಜೀನಾಮೆ ಸಲ್ಲಿಕೆ. ರಾಜ್ಯಪಾಲ ಗೆಹ್ಲೋಟ್‌ಗೆ ರಾಜೀನಾಮೆ ಪತ್ರ ಸಲ್ಲಿಸಿದ ಬೊಮ್ಮಾಯಿ. ಚುನಾವಣೆಯಲ್ಲಿ ಬಿಜೆಪಿಗೆ ಸೋಲು ಹಿನ್ನೆಲೆ ರಾಜೀನಾಮೆ ಸಲ್ಲಿಕೆ. 19 ತಿಂಗಳು 17 ದಿನಗಳ ಕಾಲ ಸಿಎಂ ಆಗಿದ್ದ ಬೊಮ್ಮಾಯಿ. ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ. ತಪ್ಪುಗಳನ್ನು ಸರಿಪಡಿಸಿ ಲೋಕಸಭಾ ಚುನಾವಣೆಗೆ ಸಿದ್ಧರಾಗ್ತೇವೆ. ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಲ್ಲ. ಪ್ರಧಾನಿ ರೋಡ್‌ಶೋನಿಂದ ಬಿಜೆಪಿಗೆ ಸೋಲು ಆಗಿಲ್ಲ. ಬಿಜೆಪಿ ಸೋಲಿಗೆ ಹಲವು ಕಾರಣಗಳಿವೆ-ಬೊಮ್ಮಾಯಿ