ತಮಿಳುನಾಡಿನ ತೆಂಕಶಿ ಜಿಲ್ಲೆಯ ಖಾಸಗಿ ಕಾರ್ಖಾನೆಯಲ್ಲಿ 15 ಅಡಿ ಉದ್ದ ಗಂಡು ಕಾಳಿಂಗ ಸರ್ಪ ಪತ್ತೆಯಾಗಿದೆ. ಈ ಕಾಳಿಂಗ ಸರ್ಪವನ್ನು ತಮಿಳುನಾಡು ಅರಣ್ಯಾಧಿಕಾರಿಗಳು ರಕ್ಷಿಸಿದ್ದಾರೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್ ಆಗಿದೆ. ಕಾಳಿಂಗ ಸರ್ಪವು ಕಡಯಂ ಪುರಸಭೆ ವ್ಯಾಪ್ತಿಯ ಗೋವಿಂದಪುರಿಯಲ್ಲಿ ಪತ್ತೆಯಾಗಿದೆ ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ.