ಗೃಹಲಕ್ಷ್ಮಿ ಹಣವೇನು ತಿಂಗಳ ಸಂಬಳ ಅಲ್ವಲ್ಲಾ: ಜಾರ್ಜ್

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಬಗ್ಗೆ ಸಚಿವ ಕೆಜೆ ಜಾರ್ಜ್ ಉಡಾಫೆಯ ಮಾತುಗಳನ್ನಾಡಿರುವುದು ವಿರೋಧಕ್ಕೆ ಗುರಿಯಾಗಿದೆ. ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯ ಹಣ ವಿಳಂಬದ ಬಗ್ಗೆ ಪ್ರತಿಕ್ರಿಯಿಸಿ, ಅದೇನು ತಿಂಗಳ ಸಂಬಳ ಅಲ್ಲವಲ್ಲಾ ಎಂದು ಅವರು ಹೇಳಿರುವುದು ವಿವಾದಕ್ಕೆ ಗುರಿಯಾಗಿದೆ.