ಹೇಮಂತ್ ಎಂ. ರಾವ್ ಅವರು ನಿರ್ದೇಶನ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಈ ಸಿನಿಮಾ ಎರಡು ಭಾಗಗಳಲ್ಲಿ ಬರುತ್ತಿದ್ದು, ಸೆಪ್ಟೆಂಬರ್ 1ರಂದು ಮೊದಲ ಪಾರ್ಟ್ ರಿಲೀಸ್ ಆಗಲಿದೆ. ಈ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಅವರು ಮನು ಎಂಬ ಪಾತ್ರ ಮಾಡಿದ್ದಾರೆ. ಅವರಿಗೆ ಜೋಡಿಯಾಗಿ ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದಲ್ಲಿ ಗಾಢವಾದ ಒಂದು ಲವ್ ಸ್ಟೋರಿ ಇರಲಿದೆ ಎಂಬುದಕ್ಕೆ ಟ್ರೇಲರ್ನಲ್ಲಿ ಸುಳಿವು ಸಿಕ್ಕಿದೆ. ರಿಯಲ್ ಲೈಫ್ನಲ್ಲಿ ಮನು ಪಾತ್ರದ ರೀತಿಯ ಹುಡುಗ ಸಿಕ್ಕರೆ ಖಂಡಿತವಾಗಿಯೂ ಒಪ್ಪಿಕೊಳ್ಳುವುದಾಗಿ ರುಕ್ಮಿಣಿ ವಸಂತ್ ಹೇಳಿದ್ದಾರೆ. ಈ ಸಿನಿಮಾಗೆ ಚರಣ್ ರಾಜ್ ಅವರು ಸಂಗೀತ ನೀಡಿದ್ದಾರೆ. ಅದ್ವೈತ್ ಗುರುಮೂರ್ತಿ ಛಾಯಾಗ್ರಹಣ ಮಾಡಿದ್ದಾರೆ.