ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ

ಮಂಗಳೂರಿನ ಸೂರಲ್ಪಾಡಿ ಬಳಿ ಬಜರಂಗದಳ ಕಾರ್ಯಕರ್ತರಿಂದ ಅಕ್ರಮ ಗೋ ಸಾಗಾಟವನ್ನು ತಡೆದ ಘಟನೆ ನಡೆದಿದೆ. ಮೂಡಬಿದಿರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಪಿಕಪ್ ವಾಹನವನ್ನು ಚೇಸ್ ಮಾಡಿ 19 ಗೋವುಗಳನ್ನು ರಕ್ಷಿಸಲಾಗಿದೆ. ವಾಹನದಲ್ಲಿದ್ದ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಈ ಘಟನೆಯ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.