ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಅವರ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ. ಪೊಲೀಸರು 10 ತಂಡಗಳನ್ನು ರಚಿಸಿ ಹುಡುಕಾಟ ನಡೆಸಿದ್ದು, ಅವರನ್ನು ಸುರಕ್ಷಿತವಾಗಿ ಪತ್ತೆ ಹಚ್ಚಿದ್ದಾರೆ. ಪೊಲೀಸ್ ಅಧಿಕಾರಿ ಯತೀಶ್ ಅವರು ಕಾರ್ಯಾಚರಣೆಯ ವಿವರಗಳನ್ನು ಬಿಚ್ಚಿಟ್ಟಿದ್ದಾರೆ.