ಉತ್ತರ ಪ್ರದೇಶದ ಜಲೌನ್‌ನಲ್ಲಿ ಮಹಿಳೆ ಮತ್ತು ಆಕೆಯ ಗೆಳೆಯ ಸಾರ್ವಜನಿಕರ ಮುಂದೆ ಆ ಮಹಿಳೆಯ ಪತಿಯನ್ನು ಥಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಶನಿವಾರ ಸಂಜೆ ಉರೈ ಕೊಟ್ವಾಲಿ ಪ್ರದೇಶದ ಚುರ್ಖಿ ರಸ್ತೆಯಲ್ಲಿ ನಡೆದ ಈ ಘಟನೆಯನ್ನು ಅಲ್ಲೇ ಇದ್ದವರು ವಿಡಿಯೋದಲ್ಲಿ ಸೆರೆಹಿಡಿದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಜಗಳವನ್ನು ನಿಲ್ಲಿಸಲು ಮಧ್ಯಪ್ರವೇಶಿಸುವ ಬದಲು, ಕೆಲವು ಜನರು ಪತಿಯ ಮೇಲೆ ನಡೆದ ಹಲ್ಲೆಯಲ್ಲಿ ಸೇರಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.