ಬಲೂಚ್ ದಂಗೆಕೋರರು ಪಾಕಿಸ್ತಾನದ ಪ್ಯಾಸೆಂಜರ್ ರೈಲನ್ನು ಅಪಹರಿಸಿದ್ದು ಹೇಗೆ ಎಂಬುದನ್ನು ತೋರಿಸುವ ವೀಡಿಯೊ ವೈರಲ್ ಆಗಿದೆ. ಈ ವಿಡಿಯೋವನ್ನ ಬಲೂಚಿಸ್ತಾನದ ದಂಗೆಕೋರರೇ ಬಿಡುಗಡೆ ಮಾಡಿದ್ದಾರೆ. 400ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಜಾಫರ್ ಎಕ್ಸ್‌ಪ್ರೆಸ್ ರೈಲು ಸಿಬಿ ನಗರದ ಮೂಲಕ ಹಾದುಹೋಗುತ್ತಿರುವಾಗ ಹಳಿಗಳ ಮೇಲೆ ಬಾಂಬ್ ಸ್ಫೋಟ ಸಂಭವಿಸಿ ಅದು ನಿಂತಿದೆ.