ಯಳಂದೂರು ಪಟ್ಟಣದ ಶ್ರೀರಂಗ್ ವೈನ್ಸ್ನಲ್ಲಿ MRP ಗಿಂತ ದುಪ್ಪಟ್ಟು ಬೆಲೆಗೆ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮದ್ಯಪ್ರಿಯರು ಪ್ರತಿಭಟನೆ ನಡೆಸಿದ್ದಾರೆ. ನಿನ್ನೆ ರಾತ್ರಿ ಬಾರ್ ಮುಂದೆ ಬಿಲ್ ಮತ್ತು ಬಾಟಲಿಗಳನ್ನು ತೋರಿಸಿ ಮಾರಾಟಗಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.