ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?; ಡ್ರೋನ್ ವಿಡಿಯೋ ಇಲ್ಲಿದೆ

ಪುಲ್ವಾಮಾದಲ್ಲಿ ಇಂದು ಮುಂಜಾನೆ ನಡೆದ ಎನ್​ಕೌಂಟರ್​​ನಲ್ಲಿ ಜೈಶ್‌ಗೆ ಸಂಬಂಧಿಸಿದ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ಸಿಕ್ಕಿತ್ತು. ಎನ್​ಕೌಂಟರ್​​ನಲ್ಲಿ ಮೃತಪಟ್ಟ ಭಯೋತ್ಪಾದಕರನ್ನು ಆಸಿಫ್ ಅಹ್ಮದ್ ಶೇಖ್, ಅಮೀರ್ ನಜೀರ್ ವಾನಿ ಮತ್ತು ಯಾವರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೆಇಎಂ ಜೊತೆ ಸಂಬಂಧ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇವರು ಏಪ್ರಿಲ್ 22ರಂದು 26 ನಾಗರಿಕರನ್ನು ಕೊಂದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾತ್ರ ವಹಿಸಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ತನಿಖೆ ಮಾಡಲಾಗುತ್ತಿದೆ.