ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಗೋರಖ್ಪುರ-ವಾರಾಣಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಎಸ್ಯುವಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರವಾಹನದಲ್ಲಿದ್ದ ಸವಾರರು ಗಾಳಿಯಲ್ಲಿ ಹಾರಿ ಕೆಳಗೆ ಬಿದ್ದಿದ್ದಾರೆ. ಇಬ್ಬರನ್ನು ಬಾನೆಟ್ ಮೇಲೆ ಸುಮಾರು 100 ಮೀಟರ್‌ಗಳಷ್ಟು ಎಳೆದೊಯ್ಯಲಾಗಿತ್ತು.