ಪ್ರಜ್ವಲ್ ರೇವಣ್ಣ ಹಿರಿಯರ ಜೊತೆ ಸರಿಯಾಗಿ ನಡೆದುಕೊಳ್ಳುತ್ತಿಲ್ಲ. ಈ ಬಾರಿ ಹಾಸನದಲ್ಲಿ ಕ್ಯಾಂಡಿಡೇಟ್ ಬದಲಿಸಿ ಎಂದು ಕಾರ್ಯಕರ್ತರು ಕೇಳಿದ್ದರು. ಹೀಗಾಗಿ, ಪ್ರಜ್ವಲ್ ರೇವಣ್ಣಗೆ ಈ ಬಾರಿ ಟಿಕೆಟ್ ಕೊಡದೇ ಇರಲು ನಿರ್ಧರಿಸಿದ್ದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ತಮ್ಮ ಹಾಗೂ ರೇವಣ್ಣ ಕುಟುಂಬದ ನಡುವೆ ಮನಸ್ತಾಪ ಇದೆ ಎನ್ನುವ ಆರೋಪವನ್ನು ತಳ್ಳಿಹಾಕಿದ್ದಾರೆ.