ಆದರೆ ರಾಜ್ಯ ಸರ್ಕಾರ ಒಂದು ಸಮುದಾಯದ ಬಗ್ಗೆ ಮೃದು ಧೋರಣೆ ತಳೆದಿರುವುದನ್ನು ಬಿಜೆಪಿ ಖಂಡಿಸುತ್ತದೆ, ಬಾಂಬ್ ಸ್ಪೋಟ ಆದಾಗ, ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂತ ಘೋಷಣೆ ಕೂಗಿದರೂ ಸರ್ಕಾರ ಹೇಗೆ ಪ್ರತಿಕ್ರಿಯಿಸಿತು ಅಂತ ಗೊತ್ತಿದೆ ಎಂದು ಹೇಳಿದರು. ಪ್ರಜ್ವಲ್ ರೇವಣ್ಣ ಪ್ರಕರಣ ದುರದೃಷ್ಟಕರ ಮತ್ತು ವಿಡಿಯೋಗಳ ಮೂಲಕ ಹೆಣ್ಣುಮಕ್ಕಳ ಮಾನ ಬೀದಿಗೆ ಬಂದಿರುವುದನ್ನು ತಾವು ಖಂಡಿಸುತ್ತೇವೆ ಎಂದು ಮಾಳವಿಕಾ ಹೇಳಿದರು.