ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ

ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ಕಿಶನ್ ಅವರು ರೀಲ್ಸ್ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡಿದ್ದಾರೆ. ಲಾಂಗ್ ಹಿಡಿದು ರೀಲ್ಸ್ ಮಾಡಿದ್ದಕ್ಕೆ ಅವರ ಮೇಲೆ ಕೇಸ್ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು. ಬಳಿಕ ಇಬ್ಬರನ್ನೂ ವಶಕ್ಕೆ ಪಡೆಯಲಾಯಿತು.