ಇಂದು ಆಷಾಢ ಮಾಸದ ಮೂರನೇ ಶುಕ್ರವಾರವಾಗಿದ್ದು ನಾಡದೇವತೆ ಚಾಮುಂಡೇಶ್ವರಿ ದರ್ಶನಕ್ಕಾಗಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸುತ್ತಿದ್ದಾರೆ. ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ, ಮಹಾಮಂಗಳಾರತಿ ನೆರವೇರಿಸಿದ್ದು, ಆಷಾಢ ಮಾಸದ ಮೂರನೇ ವಾರವೂ ಪಾಸ್ ವ್ಯವಸ್ಥೆಗೆ ಬ್ರೇಕ್ ಹಾಕಲಾಗಿದೆ. ಬದಲಾಗಿ ದರ್ಶನಕ್ಕೆ ಬರೋ ಭಕ್ತರಿಗೆ ₹300 ಹಾಗೂ 50 ರೂ. ಟಿಕೆಟ್ ವ್ಯವಸ್ಥೆ ಮಾಡಲಾಗಿದ್ದು, 65 ವರ್ಷ ಮೇಲ್ಪಟ್ಟವರಿಗೆ ₹50 ಟಿಕೆಟ್ ಸಾಲಿನಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.