ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ

ಮಂಗಳೂರು ಮಳೆ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆಯೇ ಭಾರಿ ಮಳೆ ಸುರಿದಿದೆ. ಬಿಸಿಲ ಬೇಗೆಯಿಂದ ಬಸವಳಿದಿದ್ದ ಮಂಗಳೂರು ನಗರಕ್ಕೆ ವರ್ಷಧಾರೆ ತಂಪೆರೆದಿದೆ. ಮುಂಜಾನೆಯೇ ಸುರಿದ ಮಳೆ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ ಹೋಗುವವರಿಗೆ ಕಿರಿಕಿರಿ ಉಂಟುಮಾಡಿತು. ಮಳೆಯ ವಿಡಿಯೋ ಇಲ್ಲಿದೆ ನೋಡಿ.