ಭಾರತ ಪ್ರವಾಸದಲ್ಲಿರುವ ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸಾನಾಯಕೆ ಅವರಿಗೆ ಇಂದು ಬೆಳಗ್ಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಈ ಸಂದರ್ಭದಲ್ಲಿ ದ್ರೌಪದಿ ಮುರ್ಮು ಮತ್ತು ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ಡಿಸಾನಾಯಕೆ ಅವರು ತಮ್ಮ ಸಚಿವರು, ರಾಜತಾಂತ್ರಿಕರು ಮತ್ತು ಅಧಿಕಾರಿಗಳಿಗೆ ಪರಸ್ಪರ ಪರಿಚಯಿಸಿಕೊಂಡರು. ಶ್ರೀಲಂಕಾ ಅಧ್ಯಕ್ಷರು ಡಿಸೆಂಬರ್ 15 ರಿಂದ ಡಿಸೆಂಬರ್ 17 ರವರೆಗೆ ಭಾರತ ಪ್ರವಾಸದಲ್ಲಿದ್ದಾರೆ. ಇದಕ್ಕೂ ಮುನ್ನ ಭಾನುವಾರ ದೆಹಲಿಯಲ್ಲಿ ಶ್ರೀಲಂಕಾ ಅಧ್ಯಕ್ಷರನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್ ಮುರುಗನ್ ಬರಮಾಡಿಕೊಂಡರು.