ದೆಹಲಿಯಲ್ಲಿ ಖರ್ಗೆ - ಡಿಕೆಶಿ ಭೇಟಿ

ಕರ್ನಾಟಕ ರಾಜಕಾರಣದಲ್ಲಿ, ಅದರಲ್ಲೂ ಆಡಳಿತಾರೂಢ ಕಾಂಗ್ರೆಸ್​​ನಲ್ಲಿ ಹಲವು ಮಹತ್ವದ ಬೆಳವಣಿಗೆಗಳಾಗುತ್ತಿರುವ ಸಂದರ್ಭದಲ್ಲೇ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷರನ್ನೂ ಅವರು ವರಿಷ್ಠರ ಜತೆ ಭೇಟಿ ಮಾಡಿಸಿದ್ದಾರೆ.