ಇರಾನ್‌ನ ಟೆಹ್ರಾನ್‌ನ ಮೆಹ್ರಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಬಾಂಬ್ ದಾಳಿ ನಡೆಸಿವೆ. ಟೆಹ್ರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ವೈಮಾನಿಕ ದಾಳಿ ನಡೆದಿದೆ ಎಂದು ಇರಾನಿನ ಮಾಧ್ಯಮಗಳು ತಿಳಿಸಿವೆ. ಇಸ್ರೇಲ್ ಪೈಲಟ್‌ಗಳು ಇರಾನ್ ಮತ್ತು ಲೆಬನಾನ್‌ನ ಮೇಲೆ ದಾಳಿ ನಡೆಸುತ್ತಲೇ ಇದ್ದಾರೆ. ನಮ್ಮ ರಾಷ್ಟ್ರವು ಹೆಚ್ಚಿನ ಬಲದಿಂದ ಪ್ರತಿಕ್ರಿಯಿಸುತ್ತದೆ. ಯುದ್ಧದಿಂದ ಹಿಂದೆ ಸರಿಯುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.