ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಳಗ್ಗೆ ಅಹಮದಾಬಾದ್​​ನ ಮೇಘಾನಿ ನಗರಕ್ಕೆ ಭೇಟಿ ನೀಡಿ ಏರ್ ಇಂಡಿಯಾ ವಿಮಾನ ಪತನವಾದ ಸ್ಥಳ ಪರಿಶೀಲನೆ ನಡೆಸಿದರು. ಇದೇ ವೇಳೆ, ಅಧಿಕಾರಿಗಳು ಅವರಿಗೆ ಸಮಗ್ರ ಮಾಹಿತಿ ನೀಡಿದರು. ಪ್ರಧಾನಿ ಮೋದಿ ಆಗಮನದ ಕಾರಣ ಅಪಘಾತದ ಸ್ಥಳವನ್ನು ಸಂಪೂರ್ಣವಾಗಿ ಮುಚ್ಚಲಾಗಿತ್ತು. ಅಪಘಾತದ ಸ್ಥಳಕ್ಕೆ ಹೋಗುವ ರಸ್ತೆಗಳನ್ನು ಸಹ ಮುಚ್ಚಲಾಗಿತ್ತು.