ಬೆಳ್ಳಂಬೆಳಗ್ಗೆಯೇ ಮದ್ದೂರಿನಲ್ಲಿ ಕಾಡಾನೆ ಹಿಂಡು ಪ್ರತ್ಯಕ್ಷ

ಮದ್ದೂರಿನ ಹೊಳೆ ಆಂಜನೇಯ ದೇಗುಲದ ಬಳಿ ಶಿಂಷಾ ನದಿಯಲ್ಲಿ ಬೆಳ್ಳಂಬೆಳಗ್ಗೆಯೇ ಕಾಡಾನೆ ಹಿಂಡು ಪ್ರತ್ಯಕ್ಷವಾಗಿದೆ. ಎಚ್ಚರಿಕೆಯಿಂದ ಇರುವಂತೆ ಸ್ಥಳೀಯರಿಗೆ, ರೈತರಿಗೆ ಅರಣ್ಯ ಇಲಾಖೆ ಸೂಚನೆ ನೀಡಿದ್ದು, ಸಂಜೆ ವೇಳೆಗೆ ಆನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಹಮ್ಮಿಕೊಳ್ಳಲಿದೆ.