ಅಂಕೋಲಾ: ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ 1 ಕೋಟಿ ರೂ. ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ನಿಲ್ಲಿಸಿದ್ದ ಕ್ರೆಟಾ ಕಾರಿನಲ್ಲಿ 1 ಕೋಟಿ 14 ಲಕ್ಷ 99 ಸಾವಿರ 500 ರೂಪಾಯಿ ನಗದು ಪತ್ತೆಯಾಗಿದೆ. ಕಾರಿನಲ್ಲಿ ಮೂರು ನಂಬರ್ ಪ್ಲೇಟ್‌ಗಳು ಸಹ ಪತ್ತೆಯಾಗಿವೆ. ಈ ಕಾರು ಮಂಗಳೂರಿನದ್ದೆಂದು ಶಂಕಿಸಲಾಗಿದೆ. ಪೊಲೀಸರು ಈ ಪ್ರಕರಣವನ್ನು ತನಿಖೆ ಮಾಡುತ್ತಿದ್ದಾರೆ.