ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ

ಬೆಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್​​ಗಿರಿ ನಡೆದಿದೆ. ಹಿಂದೂ ಯುವಕನ ಜತೆಗಿದ್ದ ಮುಸ್ಲಿಂ ಯುವತಿಯ ಬಳಿ ಬಂದ ಗುಂಪೊಂದು ಬುರ್ಖಾ ತೆಗೆಯುವಂತೆ ಹೇಳಿದ್ದಲ್ಲದೆ, ಬೆದರಿಕೆ ಹಾಕಿದ ಘಟನೆ ನಡೆದಿದೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಇದು ಬೆಂಗಳೂರಿನ ಯಾವ ಪ್ರದೇಶದಲ್ಲಿ ನಡೆದ ಘಟನೆ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.