ಪೊಲಿಟಿಕಲ್ ಜಡ್ಮ್​ಮೆಂಟ್ ಅಂತ ಹೇಳಿದ್ರೆ ವಿಷಾಧಿಸುತ್ತೇನೆ ಎಂದ ಜಮೀರ್

ಹೈಕೋರ್ಟ್ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ವಸತಿ ಇಲಾಖೆ ಸಚಿವ ಜಮೀರ್ ಅಹ್ಮದ್​, ನ್ಯಾಯಾಲಯದ ಬಗ್ಗೆ ಗೌರವವಿದೆ, ಬಾಯಿತಪ್ಪಿ ಬಂದಿರಬಹುದು ಅಷ್ಟೇ. ಪೊಲಿಟಿಕಲ್ ಬೆನಿಫಿಟ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದೆ ಅಷ್ಟೇ ಎಂದಿದ್ದಾರೆ. ಆ ಮೂಲಕ ನ್ಯಾಯಾಂಗ ನಿಂದನೆ ತೂಗುಗತ್ತಿಯಿಂದ ಎಚ್ಚೆತ್ತುಕೊಂಡಿದ್ದಾರೆ.