ಜೂನ್ 26 ಅಥವಾ 27ರಿಂದ ಗೃಹಲಕ್ಷ್ಮೀ ಅರ್ಜಿ ಸಲ್ಲಿಕೆ ಆರಂಭ

ಗೃಹಲಕ್ಷ್ಮೀ ಯೋಜನೆ ಜಾರಿ ತಡವಾಗುತ್ತಿಲ್ಲ ಬದಲಾಗಿ ಅರ್ಜಿ ಸಲ್ಲಿಸಲು ಆ್ಯಪ್​ ತಯಾರಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ಜೂನ್ ​​​26 ಅಥವಾ 27ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗುತ್ತೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ಪಾವತಿಸಬಾರದು ಎಂದು ಮನವಿ ಮಾಡಿದ್ದಾರೆ..