ರಕ್ಷಿತ್ ಶೆಟ್ಟಿ ನಟಿಸಿ ಹೇಮಂತ್ ರಾವ್ ನಿರ್ದೇಶನ ಮಾಡಿರುವ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾದ ಟ್ರೈಲರ್ ನಿನ್ನೆ (ಆಗಸ್ಟ್ 17) ಬಿಡುಗಡೆ ಆಗಿದ್ದು, ಟ್ರೈಲರ್ನಲ್ಲಿ ನಾಯಕಿ ರುಕ್ಮಿಣಿ ವಸಂತ್ ಸರಳತೆ, ನಟನೆ ಎಲ್ಲರ ಗಮನ ಸೆಳೆಯುತ್ತಿದೆ. ಕೇವಲ ಒಂದು ಸಿನಿಮಾದಲ್ಲಿ ನಟಿಸಿದ್ದ ರುಕ್ಮಿಣಿ ವಸಂತ್ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾಕ್ಕೆ ಆಯ್ಕೆ ಆಗಿದ್ದು ಹೇಗೆ? ಅವಕಾಶ ಬಂದಿದ್ದು ಹೇಗೆ? ಅವರೇ ವಿವರಿಸಿದ್ದಾರೆ.