ಮುಂದಿನ ವರ್ಷದಿಂದಲೇ ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಸ್ಪರ್ಧೆ: ಡಿಕೆ ಶಿವಕುಮಾರ್ ಘೋಷಣೆ

ಮುಂದಿನ ವರ್ಷದಿಂದಲೇ ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಸ್ಪರ್ಧೆಯನ್ನು ಸೇರ್ಪಡೆಗೊಳಿಸುವುದಾಗಿ ಡಿಸಿಎಂ ಡಿಕೆ ಶಿವಕುಮಾರ್​ ಘೋಷಿಸಿದ್ದಾರೆ. ಮಂಗಳೂರಿನ ಗುರುಪುರ ಕಂಬಳದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಮತ್ತು ಮೈಸೂರು ಜಿಲ್ಲಾ ಸಚಿವರೊಂದಿಗೆ ಮಾತುಕತೆ ನಡೆಸಿ, 3 ಎಕರೆ ಜಾಗದಲ್ಲಿ ಶಾಶ್ವತ ಕಂಬಳ ಕೆರೆಯನ್ನು ನಿರ್ಮಿಸುವ ಯೋಜನೆಯನ್ನು ರೂಪಿಸುವುದಾಗಿ ತಿಳಿಸಿದ್ದಾರೆ.