ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅತ್ತ ವೈದ್ಯರು ಮೊಬೈಲ್ನಲ್ಲಿ ರೀಲ್ಸ್ ನೋಡುತ್ತಾ ಕುಳಿತಿದ್ದರು, ಇತ್ತ ಮಹಿಳಾ ರೋಗಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ವೈದ್ಯರು ಚಿಕಿತ್ಸೆ ನೀಡುವ ಬದಲು ಮೊಬೈಲ್ ನೋಡುತ್ತಿದ್ದುದು ಆಕ್ರೋಶಕ್ಕೆ ಕಾರಣವಾಗಿದೆ. ದೂರು ಸ್ವೀಕರಿಸಿದ ಸಿಎಂಒ ತನಿಖೆಗೆ ಆದೇಶಿಸಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯಾವಳಿ ಕೂಡ ಹೊರಬಿದ್ದಿದೆ. ಮೈನ್ಪುರಿಯ ಮಹಾರಾಜ ತೇಜ್ ಸಿಂಗ್ ಜಿಲ್ಲಾ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ.