ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಸಿದ್ದರಾಮಯ್ಯ ಪೂಜೆ

ಶಿರಡಿಯ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ X ಹ್ಯಾಂಡಲ್ ನಲ್ಲಿ ಚಿತ್ರಗಳೊಂದಿಗೆ ಪೋಸ್ಟ್ ಮಾಡಿದ್ದಾರೆ. ತಮ್ಮ ಸಂದೇಶದಲ್ಲಿ ಅವರು ಮಳೆ-ಬೆಳೆ ಉತ್ತಮವಾಗಲಿ, ನಾಡಿನಲ್ಲಿ ಸುಖ, ಶಾಂತಿ ಸಮೃದ್ಧಿ ನೆಲೆಗೊಂಡಿರಲಿ ಎಂದು ಪ್ರಾರ್ಥಿಸಿರುವುದಾಗಿ ಹೇಳಿಕೊಂಡಿದ್ದಾರೆ.