ಕೋಲಾರದ ರುಮಾನಾ ಕೌಸರ್ ಕೊರಳಿಗೆ ಚಿನ್ನದ ಪದಕ, ತಂದೆ ಆಟೋ ಚಾಲಕ

ಸಿಂಗಾಪೂರ್ ಸೇರಿದಂತೆ ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಭಾರತದ ಪ್ರತಿನಿಧಿಯಾಗಿ ಭಾಗವಹಿಸಿರುವ ರುಮಾನಾ ಹಲವು ಚಿನ್ನದ ಪದಕಗಳನ್ನು ಗಳಿಸಿದ್ದಾರೆ. ಪ್ರಸ್ತುತ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 3,000 ಹೆಣ್ಣು ಮಕ್ಕಳಿಗೆ ಓಬವ್ವ ಆತ್ಮ ರಕ್ಷಣೆ ಕರಾಟೆ ತರಬೇತಿಯನ್ನು ನೀಡುತ್ತಿದ್ದಾರೆ