ನಾಳೆ (ಅ.02) ಗಾಂಧಿ ಜಯಂತಿ ಹಿನ್ನೆಲೆ ಇಂದು ನಗರದಲ್ಲಿ ಸ್ವಚ್ಛ ಭಾರತ್ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಗಾಂಧಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಬಿಜೆಪಿ ಮುಖಂಡ ಸಪ್ತಗಿರಿಗೌಡ ನೇತೃತ್ವದಲ್ಲಿ ಅಭಿಯಾನ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಬಿಜೆಪಿ ಉಪಾಧ್ಯಕ್ಷ, ಶಾಸಕ ಬಿ.ವೈ ವಿಜಯೇಂದ್ರ ಭಾಗಿಯಾಗಿದ್ದಾರೆ. ಈ ವೇಳೆ ಬಿ.ವೈ ವಿಜಯೇಂದ್ರ ಅವರು ಪೊರಕೆ ಹಿಡಿದು ಕಸ ಗುಡಿಸಿದರು.