ಅಂಬಾನಿ ಮತ್ತು ಅದಾನಿ ಎಂಬಿಬ್ಬರು ಉದ್ಯಮಿಗಳಿಗಾಗಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹಿಂದೆಲ್ಲಾ ಟೀಕಿಸುತ್ತಿದ್ದ ರಾಹುಲ್ ಗಾಂಧಿ ಇತ್ತೀಚೆಗೆ ಅವರಿಬ್ಬರ ಹೆಸರನ್ನು ಪ್ರಸ್ತಾಪಿಸುತ್ತಿಲ್ಲ. ಈ ವಿಚಾರವನ್ನು ನರೇಂದ್ರ ಮೋದಿ ತಮ್ಮ ಚುನಾವಣಾ ಪ್ರಚಾರಕ್ಕೆ ಅಸ್ತ್ರವನ್ನಾಗಿ ಮಾಡಿಕೊಂಡಿದ್ದಾರೆ. ಅಂಬಾನಿ ಮತ್ತು ಅದಾನಿಯಿಂದ ಇವರಿಗೆ ಕಪ್ಪು ಹಣ ಸಿಕ್ಕಿದೆಯಾ ಎಂದು ಪ್ರಶ್ನಿಸಿದ್ದಾರೆ.