ಉಡುಪಿಯಲ್ಲಿ ಕೆಎಸ್ ಈಶ್ವರಪ್ಪ ಸುದ್ದಿಗೋಷ್ಟಿ

ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನ ಗೆದ್ದಿತ್ತು ಈ ಬಾರಿ ಎಷ್ಟು ಗೆಲ್ಲುತ್ತೇವೆಯೋ ಗೊತ್ತಿಲ್ಲ, ಆದರೆ ಒಂದು ಮಾತು ಸತ್ಯ, ಚುನಾವಣೆಯ ಬಳಿಕ ವಿಜಯೇಂದ್ರ ರಾಜ್ಯಾಧ್ಯಕ್ಷನ ಸ್ಥಾನದಿಂದ ಕೆಳಗಿಳಿಯುತ್ತಾರೆ, ಶಿವಮೊಗ್ಗ ಕ್ಷೇತ್ರದಲ್ಲಿ ರಾಘವೇಂದ್ರ ಸೋಲುತ್ತಾರೆ ಮತ್ತು ರಾಜ್ಯ ಬಿಜೆಪಿ ಕುಟುಂಬ ರಾಜಕಾರಣದಿಂದ ಮುಕ್ತವಾಗಿ ಪಕ್ಷದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ವಾಪಸ್ಸು ಬರುತ್ತದೆ ಎಂದು ಈಶ್ವರಪ್ಪ ಹೇಳಿದರು.