ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಕ್ಷೇತ್ರ ವರುಣಾ ಸೇರಿದಂತೆ ಮೈಸೂರಿನ ಹಲವೆಡೆ ಶನಿವಾರ ಪ್ರವಾಸ ಮಾಡಿದ್ದಾರೆ. ಇದೇ ವೇಳೆ ಮೈಸೂರಿನಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದಕ್ಕೆ ಅವರು ಕೋಪಗೊಂಡರು. ಮೈಸೂರು ಏರ್‌ಪೋರ್ಟ್‌ನಿಂದ ಜಿಲ್ಲಾ ಪಂಚಾಯತ್ ಆವರಣಕ್ಕೆ ಬಂದಿದ್ದ ಮುಖ್ಯಮಂತ್ರಿಗಳಿಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದಕ್ಕೆ ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ವಿರುದ್ಧ ಸಿದ್ದರಾಮಯ್ಯ ಗರಂ ಆಗಿದ್ದಾರೆ.