ಲೋಕಸಭಾ ಚುನಾವಣೆ ಬಳಿಕ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ. ಬಿಜೆಪಿ ಅಧಿಕಾರ ಪಡೆಯಲಿದೆ ಎಂದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿಕೆಗೆ ರಾಜ್ಯ ಕಾಂಗ್ರೆಸ್ ನಾಯಕರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಚುನಾವಣೆ ಬಳಿಕ ಪತನವಾಗುವುದು ಕರ್ನಾಟಕ ಸರ್ಕಾರವಲ್ಲ, ಮಹಾರಾಷ್ಟ್ರ ಸರ್ಕಾರ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸುತ್ತಿರುವ ಶಿವಸೇನಾ ಮತ್ತು ಎನ್ಸಿಪಿ ಭಿನ್ನಮತೀಯರು ವಾಪಸ್ ತಮ್ಮ ಮೂಲ ಪಕ್ಷಗಳಿಗೆ ಹೋಗಲಿದ್ದಾರೆ. ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ರಚಿಸಲಿದ್ದಾರೆ ಎಂದು ಡಿಕೆಶಿ ತಿಳಿಸಿದ್ದಾರೆ.