ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸೇರಿದಂತೆ, ಆರು ಸಾರಿಗೆ ಸಂಘಟನೆಗಳು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯದಲ್ಲಿ ಡಿಸೆಂಬರ್ 31 ರಂದು ಮುಷ್ಕರಕ್ಕೆ ಈಗಾಗಲೇ ಕರೆ ನೀಡಿದೆ. ಹಾಗಾಗಿ ಇಂದು ಯಾದಗಿರಿಯಲ್ಲಿ ಪ್ರತಿಭಟನೆ ಮಾಡಲಾಗಿದ್ದು, ಸಾರಿಗೆ ನೌಕರರಿಂದ ಜನರಿಗೆ ಕರಪತ್ರ ಹಂಚಿಕೆ ಮಾಡಲಾಗಿದೆ.