ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭ ಮೇಳದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ, ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಹೆದ್ದಾರಿಯಲ್ಲಿ ಮಂಗಳವಾರ ಟೆಂಪೋ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಸಾವನ್ನಪ್ಪಿದ್ದಾರೆ. ಸಿಹೋರಾದ ರಾಷ್ಟ್ರೀಯ ಹೆದ್ದಾರಿ-30 ರಲ್ಲಿ ಮೊಹ್ಲಾ ಬರ್ಗಿ ಬಳಿ ಈ ಅಪಘಾತ ಸಂಭವಿಸಿದ್ದು, ಸಾವನ್ನಪ್ಪಿದವರು ಆಂಧ್ರಪ್ರದೇಶಕ್ಕೆ ಸೇರಿದವರು. ಅಪಘಾತದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ