ಬೆಂಗಳೂರಿನ ಪ್ರೆಸ್ಟೀಜ್ ಗ್ರೂಪ್‌ನ ನಾಲ್ಕು ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ. 50ಕ್ಕೂ ಹೆಚ್ಚು ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಪ್ರೆಸ್ಟೀಜ್ ಗ್ರೂಪ್ ಅಪಾರ್ಟ್‌ಮೆಂಟ್ ನಿರ್ಮಾಣ ಸೇರಿದಂತೆ ಹಲವು ಉದ್ಯಮಗಳನ್ನು ಹೊಂದಿದೆ.