ದ್ವಾರಕ ಎಕ್ಸ್ಪ್ರೆಸ್ವೇನಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕೂಡಲೇ ಕಾರುಗಳಿಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ವರದಿಯಾಗಿದೆ. ನೋಡನೋಡುತ್ತಿದ್ದಂತೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಓರ್ವ ಪ್ರಯಾಣಿಕ ಸುಟ್ಟು ಕರಕಲಾಗಿದ್ದಾರೆ, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇವೆ ತಿಳಿಸಿದೆ.