ಬೆಂಗಳೂರಿನಲ್ಲಿ ಹೊಸ ವರ್ಷದ ಆಚರಣೆಗೆ ಭರ್ಜರಿ ಸಿದ್ಧತೆ ನಡೆದಿದೆ. ಎಂ.ಜಿ. ರಸ್ತೆ, ಚರ್ಚ್ ಸ್ಟ್ರೀಟ್ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. 180 ಹೊಸ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಮತ್ತು ಮಹಿಳೆಯರ ಸುರಕ್ಷತೆಗಾಗಿ 15 ಸೇಫ್ಟಿ ಐಲ್ಯಾಂಡ್‌ಗಳು ಮತ್ತು 15 ವಾಚ್ ಟವರ್‌ಗಳನ್ನು ಸ್ಥಾಪಿಸಲಾಗಿದೆ. 500 ಹೋಮ್ ಗಾರ್ಡ್ ಮತ್ತು 700 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಡಿಸಿಪಿಗಳು ಮಧ್ಯರಾತ್ರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ.