ಕುಡಿದ ಮತ್ತಿನಲ್ಲಿ ಕೆಪಿಟಿಸಿಎಲ್ ಎಂಜಿನಿಯರ್​​ಗಳ ರೋಚಕ ಕಾಳಗ

ಕಳೆದ ಗುರುವಾರ ಪಾವಗಡ ಪಟ್ಟಣದ ಹೊರವಲಯದಲ್ಲಿ ನಾಲ್ವರು ನೌಕರರು ಡ್ಯೂಟಿಗೆ ಬಂಕ್ ಮಾಡಿ ಎಣ್ಣೆ ಪಾರ್ಟಿ ಮಾಡಿಕೊಂಡಿದ್ದರು. ಪಾರ್ಟಿ ಮದ್ಯೆ ಮಾತಿಗೆ ಮಾತು ಬೆಳೆದು ತೀವ್ರವಾಗಿ ಬಡಿದಾಡಿಕೊಂಡಿದ್ದಾರೆ. ಕೆಪಿಟಿಸಿಎಲ್ ಜೂನಿಯರ್ ಎಂಜಿನಿಯರ್​​ಗಳಾದ ಶ್ರೀನಿವಾಸ್, ವಾದಿರಾಜ್, ಬೆಸ್ಕಾಂ ಸಿಬ್ಬಂದಿ ನರಸಿಂಹಮೂರ್ತಿ ಮತ್ತು ಸಂತೋಷ್ ನಡುವೆ ಹಣಾಹಣಿ ನಡೆದಿದೆ.