ಏಕೈಕ ಟೆಸ್ಟ್ ಪಂದ್ಯಕ್ಕಾಗಿ ಭಾರತಕ್ಕೆ ಬಂದಿಳಿದ ನ್ಯೂಜಿಲೆಂಡ್ ತಂಡ

ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕಾಗಿ ನ್ಯೂಜಿಲೆಂಡ್ ತಂಡ ಭಾರತಕ್ಕೆ ಆಗಮಿಸಿದೆ. ಅಫ್ಘಾನಿಸ್ತಾನ, ಕಿವೀ ತಂಡವನ್ನು ಆತ್ಮೀಯವಾಗಿ ಸ್ವಾಗತಿಸಿದೆ. ಇದೀಗ ಉಭಯ ತಂಡಗಳು ಏಕೈಕ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಸೆಪ್ಟೆಂಬರ್ 9 ರಿಂದ ಗ್ರೇಟರ್ ನೋಯ್ಡಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಮೈದಾನದಲ್ಲಿ ಪಂದ್ಯ ನಡೆಯಲಿದೆ.